ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರ ವೇತನ ಶೇಕಡಾ 15ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರ (contractual employees) ವೇತನ ಶೇಕಡಾ 15ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪಿ.ಎನ್.ಶ್ರೀನಿವಾಸಾಚಾರಿ ಸಮಿತಿ ಶಿಫಾರಸಿನನ್ವಯ ಏಪ್ರಿಲ್ 1ರಿಂದ ಜಾರಿಯಾಗುವಂತೆ ವೇತನ ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕೆಲಸ ಮಾಡುತ್ತಿರುವ 25 ಸಾವಿರಕ್ಕೂ ಹೆಚ್ಚು ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರಿತ ನೌಕರರಿಗೆ ಶೀಘ್ರದಲ್ಲೇ ಶೇ. 15 ರಷ್ಟು ವೇತನ ಹೆಚ್ಚಳದ ಆದೇಶ ಹೊರಬೀಳಲಿದೆ. ಜೊತೆಗೆ ಇನ್ನು ಎರಡು ತಿಂಗಳಲ್ಲಿ ಅವರಿಗೆ ಕನಿಷ್ಠ ವೇತನ ಜಾರಿಗೊಳಿಸುವ ಪ್ರಕ್ರಿಯೆಯೂ ನಡೆಯುತ್ತಿದೆ ಎಂದು ಇತ್ತೀಚೆಗೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದರು.
ಬಿಬಿಎಂಪಿ ವ್ಯಾಪ್ತಿಯ 11,307 ಪೌರ ಕಾರ್ಮಿಕರ ನೇಮಕಾತಿಗಾಗಿ ರಾಜ್ಯ ಸರ್ಕಾರ ಆದೇಶ
ಬಿಬಿಎಂಪಿ ವ್ಯಾಪ್ತಿಯಲ್ಲಿ ನೇರ ಪಾವತಿ ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಭರ್ತಿಗಾಗಿ 11,307 ಸಂಖ್ಯಾತಿರಿಕ್ತ ಹುದ್ದೆಗಳನ್ನು ಸೃಜಿಸಿ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಇರುವ ಒಟ್ಟು 43 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು. I.P.D ಸಾಲಪ್ಪ ವರದಿ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಹೇಳಿದ್ದರು. ಇದಕ್ಕೂ ಮುನ್ನ ಬೆಂಗಳೂರಿನ ಆರ್. ಟಿ ನಗರದ ಸಿಎಂ ನಿವಾಸದ ಮುಂದೆ ಪೌರಕಾರ್ಮಿಕರು ಪ್ರತಿಭಟನೆ ಮಾಡಿದ್ದರು.
ಬೆಂಗಳೂರಿನಲ್ಲಿ 26 ಸಾವಿರ ಪೌರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಆದರೆ ಸರ್ಕಾರಕ್ಕೆ 8 ಸಾವಿರ ಕಾರ್ಮಿಕರನ್ನು ಖಾಯಂ ಮಾಡುವ ಅವಕಾಶವಿದೆ. ಆದರೆ ಸರ್ಕಾರ 1 ಸಾವಿರ ಪೌರಕಾರ್ಮಿಕರನ್ನ ಖಾಯಂ ಮಾಡಲಾಗಿದೆ. ಉಳಿದ 7 ಸಾವಿರ ಪೌರಕಾರ್ಮಿಕರ ಖಾಯಮಾತಿಗೆ ಒತ್ತಾಯ ಮಾಡಿದರು.
ಈ ಹಿಂದ ವಿವಿಧ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಪೌರಕಾರ್ಮಿಕರು ರಾಜ್ಯದಲ್ಲಿ ಹಲವು ಕಡೆ ಪ್ರತಿಭಟನೆ ಮಾಡಿದ್ದರು. ಬೆಂಗಳೂರಿನಲ್ಲಿ ಫ್ರೀಡಂಪಾರ್ಕ್ನಲ್ಲಿ ಕೂಡ ಅಹೋರಾತ್ರಿಯೂ ಧರಣಿ ನಡೆಸಿದ್ದು, ಲಿಖಿತ ರೂಪದ ಆದೇಶ ಪ್ರತಿ ಬಂದ ಬಳಿಕ ಧರಣಿ ಕೈಬಿಡುತ್ತೇವೆಂದು ಪ್ರತಿಭಟನಕಾರರು ಹೇಳಿದ್ದರು.