ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಕಾಮಗಾರಿ ಉದ್ಘಾಟನೆಗೆಂದು ಮಾ.12ರಂದು ಆಗಮಿಸಲಿದ್ದಾರೆ. ಅಂದು ಮಂಡ್ಯ ನಗರದಲ್ಲಿ ರೋಡ್ ಶೋ ನಡೆಯುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಪರಿಶೀಲನೆ ನಡೆಸಿದರು.
ನಗರದ ಪ್ರವಾಸಿಮಂದಿರ ವೃತ್ತದಿಂದ ಪ್ರಾರಂಭವಾಗಿ ಜಯಚಾಮರಾಜೇಂದ್ರ ಒಡೆಯರ್ ವೃತ್ತದ ಮಾರ್ಗವಾಗಿ ನಂದಾ ವೃತ್ತದ ಮೂಲಕ ರೋಡ್ ಶೋ ಮುಕ್ತಾಯವಾಗಲಿದೆ. ಸುಮಾರು 1.5 ಕಿ.ಮೀ ರೋಡ್ ಶೋ ನಡೆಯಲಿರುವ ಹಿನ್ನೆಲೆಯಲ್ಲಿ ರಸ್ತೆಯ ಶುಚಿತ್ವ, ದುರಸ್ಥಿ ಕುರಿತು ಅಧಿಕಾರಿಗಳ ತಂಡದೊಂದಿಗೆ ಪರಿಶೀಲನೆ ನಡೆಸಿದರು. ಅಂತೆಯೇ ಸ್ವಚ್ಛತೆ ಬಗ್ಗೆ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ತಹಸೀಲ್ದಾರ್ ವಿಜಯ್ಕುಮಾರ್, ಪೌರಾಯುಕ್ತ ಮಂಜುನಾಥ್, ಪರಿಸರ ವಿಭಾಗದ ಇಂಜಿನಿಯರ್ಗಳಾದ ರುದ್ರೇಗೌಡ, ರವಿಕುಮಾರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ನರೇಶ್ ಇತರರಿದ್ದರು.