ಕುಸ್ತಿಪಟುಗಳಿಂದ (Wrestlers) ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಭಾವುಕ ಹೇಳಿಕೆಯೊಂದನ್ನ ನೀಡಿದ್ದಾರೆ. ಕಳೆದ 4 ತಿಂಗಳಿನಿಂದ ಕುಸ್ತಿ ಕ್ರೀಡೆ ಸ್ಥಗಿತಗೊಂಡಿದೆ. ನನ್ನನ್ನ ಗಲ್ಲಿಗೇರಿಸಿದರೂ ಏರಲು ಸಿದ್ಧನಿದ್ದೇನೆ. ನನ್ನ ನೇಣಿಗೆ ಬೇಕಾದರೂ ಹಾಕಿ ಆದ್ರೆ ಕುಸ್ತಿ ಚಟುವಟಿಕೆ ಮಾತ್ರ ನಿಲ್ಲಬಾರದು ಎಂದು ಮನವಿ ಮಾಡಿದ್ದಾರೆ.
ಟಾಪ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ (Vinesh Phogat), ಸಾಕ್ಷಿ ಮಲಿಕ್ ಮತ್ತು ಭಜರಂಗ್ ಪೂನಿಯಾ (Bajrang Punia) ಸೇರಿದಂತೆ ಹಲವು ಮಂದಿ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್ನಲ್ಲಿ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸಿ, ಫೆಡರೇಶನ್ನಿಂದ ಹೊರಹಾಕುವಂತೆ ಒತ್ತಾಯಿಸಿ ಪ್ರತಿಭಟನೆಗಿಳಿದಿದ್ದಾರೆ. ಅಧ್ಯಕ್ಷರು ಮಹಿಳಾ ಗ್ರಾಫ್ಲರ್ಗಳನ್ನ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಹಲವು ದಿನಗಳಿಂದ ಪ್ರತಿಭಟನೆಗಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಚಾಂಪಿಯನ್ಶಿಪ್ ಸೇರಿದಂತೆ ಇನ್ನಿತರ ಶಿಬಿರಗಳು ಬಂದ್ ಆಗಿವೆ.