ಸಲಿಂಗ ವಿವಾಹ (Same sex marriage) ಕುರಿತಾಗಿ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ (LGBTQIA) ಸಲಹೆಗಳನ್ನು ಪರಿಗಣಿಸಲು ಸಮಿತಿಯನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್ಗೆ (Supreme Court) ಕೇಂದ್ರ ಸರ್ಕಾರ (Central Government) ತಿಳಿಸಿದೆ.
ಲೈಂಗಿಕ ಅಲ್ಪಸಂಖ್ಯಾತ ಸಮುದಾಯ ಒಂದೇ ಲಿಂಗದ ವ್ಯಕ್ತಿಗಳೊಂದಿಗಿನ ಸಂಬಂಧದಲ್ಲಿ ಎದುರಿಸುತ್ತಿರುವ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಲಹೆಗಳನ್ನು ಪಡೆಯಲಾಗುವುದು. ಇದಕ್ಕಾಗಿ ಸಂಪುಟ ಕಾರ್ಯದರ್ಶಿ ನೇತೃತ್ವದ ಸಮಿತಿಯನ್ನು ರಚಿಸಲಾಗುತ್ತದೆ. ಇದರಿಂದ ಸಮುದಾಯದ ಎದುರಿಸುತ್ತಿರುವ ಸಮಸ್ಯೆಗಳನ್ನು ಕಲೆಹಾಕಲು ಅನುಕೂಲವಾಗುತ್ತದೆ ಎಂದು ಕೇಂದ್ರ ಹೇಳಿಕೊಂಡಿದೆ.