ಚೈತ್ರ ಪೌರ್ಣಿಮೆಯ ಬೆಳದಿಂಗಳಲ್ಲಿ ಮಲ್ಲಿಗೆಯ ಕಂಪಿನೊಂದಿಗೆ ಗುರುವಾರ ಮಧ್ಯರಾತ್ರಿ ಇತಿಹಾಸ ಪ್ರಸಿದ್ಧ ಬೆಂಗಳೂರು ಕರಗ ಶಕ್ತ್ಯೋತ್ಸವವು ವಿಜೃಂಭಣೆಯಿಂದ ನಡೆಯಲಿದೆ.
ಇತಿಹಾಸ ಪ್ರಸಿದ್ಧ ಕರಗದ ವೈಭವವನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದುಬರಲಿದೆ. ಕರಗ ಶಕ್ತ್ಯೋತ್ಸವದ ಹಿನ್ನೆಲೆಯಲ್ಲಿ ಧರ್ಮರಾಯಸ್ವಾಮಿ ದೇವಸ್ಥಾನ ಮತ್ತು ಸುತ್ತಮುತ್ತಲ ರಸ್ತೆಗಳು ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸುತ್ತಿವೆ. ಭದ್ರತೆ ದೃಷ್ಟಿಯಿಂದ ದೇವಸ್ಥಾನದ ಸುತ್ತಮುತ್ತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ನಗರದ ಆಯ್ದ ರಸ್ತೆಗಳಲ್ಲಿ ಕರಗದ ಮೆರವಣಿಗೆ ಸಾಗಲಿದ್ದು, ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳು, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ನೆರೆ ರಾಜ್ಯಗಳಿಂದಲೂ ಭಕ್ತರು ಆಗಮಿಸಲಿದ್ದಾರೆ.
ಕರಗ ಉತ್ಸವದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ಪುರಾಣ ಕಥನ ಹಾಗೂ ಪೊಂಗಲ್ ಸೇವೆ ವಿಶೇಷವಾಗಿ ನಡೆಯಿತು. ಎಂದಿನಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರದ್ಧೆ, ಭಕ್ತಿಯಿಂದ ನಡೆದವು. ಏ.6ರ ಮಧ್ಯರಾತ್ರಿ ಕರಗ ಶಕ್ತ್ಯೋತ್ಸವವು ಅದ್ಧೂರಿಯಾಗಿ ನಡೆಯಲಿದೆ. ಈ ಬಾರಿಯೂ ಕರಗ