ಬೆಂಗಳೂರು: ಅಲೋಕ್ ಕುಮಾರ್ ಅವರನ್ನು ಎಡಿಜಿಪಿ ಹುದ್ದೆಯಿಂದ ವಜಾಗೊಳಿಸಲು ಕೋರಿದ್ದ ಅರ್ಜಿಯನ್ನು ಬೆಂಗಳೂರಿನ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠ, ಅರ್ಜಿಯು ವಿಚಾರಣಾ ಮಾನ್ಯತೆ ಹೊಂದಿಲ್ಲ.
ಇದು ಕೇವಲ ನಿಸ್ಪ್ರಯೋಜಕ ಅರ್ಜಿಯಾಗಿದ್ದು, ವಜಾಗೊಳಿಸವುದಾಗಿ ತಿಳಿಸಿತು. ಇದರಿಂದ ಅರ್ಜಿಯನ್ನು ಹಿಂಪಡೆಯಲಾಗುವುದು ಎಂದು ಮಲ್ಲಿಕಾರ್ಜುನ ಪರ ವಕೀಲರು ತಿಳಿಸಿದರು. ಅದಕ್ಕೆ ಸಮ್ಮತಿಸಿದ ನ್ಯಾಯಪೀಠ, ಅರ್ಜಿ ಹಿಂಪಡೆದ ಹಿನ್ನೆಲೆಯಲ್ಲಿ ಅರ್ಜಿ ವಜಾಗೊಳಿಸಲಾಗುತ್ತಿದೆ ಎಂದು ತಿಳಿಸಿತು.