ಈಶಾನ್ಯ ರಾಜ್ಯ ತ್ರಿಪುರದಲ್ಲಿ ಬಿಸಿಗಾಳಿ ಹೆಚ್ಚುತ್ತಿದೆ. ಬಿಸಿಲಿನ ಝಳದಿಂದಾಗಿ ದೈನಂದಿನ ಜೀವನಕ್ಕೆ ತೊಂದರೆಯಾಗತೊಡಗಿದೆ. ಮಕ್ಕಳು ಶಾಲೆಗೆ ಹೋಗಿ ಬರುವಾಗ ಬಿಸಿಲಿನ ತಾಪ ಎದುರಿಸಬೇಕಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ರ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.ಬಿಸಿಗಾಳಿ ಪರಿಸ್ಥಿತಿಯಿಂದಾಗಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳನ್ನು ಏಪ್ರಿಲ್ 18 ರಿಂದ 23 ರವರೆಗೆ ಮುಚ್ಚಲಾಗುವುದು ಎಂದು ಸಿಎಂ ಸಹಾ ಹೇಳಿದ್ದಾರೆ.
ಬಿಸಿಲಿನ ತಾಪವು ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಅವರು ಫೇಸ್ಬುಕ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ, ಎಲ್ಲಾ ಸರ್ಕಾರಿ ಮತ್ತು ರಾಜ್ಯ ಅನುದಾನಿತ ಶಾಲೆಗಳನ್ನು ಮುಚ್ಚುವುದಾಗಿ ಘೋಷಿಸಿದ್ದಾರೆ. ಚಾಲ್ತಿಯಲ್ಲಿರುವ ಹವಾಮಾನ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಖಾಸಗಿ ಶಾಲೆಗಳಿಗೂ ಇದೇ ರೀತಿ ಮಾಡುವಂತೆ ಅವರು ಮನವಿ ಮಾಡಿದರು.