ಮಹತ್ವಾಕಾಂಕ್ಷೆಯ ಪಂಚರತ್ನ ಯೋಜನೆಗಳ ಜಾರಿ, ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳ ಕ್ಷಿಪ್ರಗತಿಯ ಅನುಷ್ಠಾನ ಸೇರಿದಂತೆ ಹಲವಾರು ಪ್ರಮುಖ ಘೋಷಣೆಗಳನ್ನು ಮಾಡಿರುವ ಜೆಡಿಎಸ್ ಪಕ್ಷವು, ಜನತೆಗೆ ಸಾಮಾಜಿಕ ಭದ್ರತೆ ನೀಡುವ ಹಿನ್ನೆಲೆಯಲ್ಲಿ ಅನೇಕ ಜನಾನುರಾಗಿ ಕಾರ್ಯಕ್ರಮಗಳನ್ನು ರೂಪಿಸಿದೆ.
ಪ್ರಸಕ್ತ ಕರ್ನಾಟಕ ವಿಧಾನಸಭೆ ಚುನಾವಣೆಯ ಜೆಡಿಎಸ್ ಪ್ರಣಾಳಿಕೆ ಜನತಾ ಪ್ರಣಾಳಿಕೆಯನ್ನು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಪ್ರಣಾಳಿಕೆ ರಚನೆ ಸಮಿತಿ ಅಧ್ಯಕ್ಷ ಬಿಎಂ ಫಾರೂಕ್ ಹಾಗೂ ಸಮಿತಿ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ ಅವರು ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಬಿಡುಗಡೆ ಮಾಡಿದರು.