ನಾಳೆ ಪಟ್ಟಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಎಪ್ರಿಲ್ 28ರಂದು ಶುಕ್ರವಾರ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ ರೈತ ಮೋರ್ಚಾ ಉಪಾಧ್ಯಕ್ಷ ಷಣ್ಮುಖ ಗುರಿಕಾರ ತಿಳಿಸಿದರು. ಪಟ್ಟಣದಲ್ಲಿ ಬುಧವಾರ ರಾತ್ರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ನವಲಗುಂದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಂಕರ್ ಪಾಟೀಲ ಮುನೇನಕೊಪ್ಪರ ಚುನಾವಣೆ ಪ್ರಚಾರಕ್ಕಾಗಿ ಶುಕ್ರವಾರ 28ನೇ ತಾರೀಕಿನಂದು ಬೆಳಿಗ್ಗೆ 10 ಗಂಟೆಗೆ ಕೇಂದ್ರ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ.