ಪುಲ್ವಾಮಾ ದಾಳಿ (Pulwama attack)ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಮುಚ್ಚಿಡುವಂತಹದ್ದು ಏನೂ ಇಲ್ಲ ಎಂದು ಹೇಳಿದೆ. ಈ ಬಗ್ಗೆ ಖಾಸಗಿ ವಾಹಿನಿಯಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಅಮಿತ್ ಶಾ (Amit Shah) ಅವರು, ಜಮ್ಮು ಮತ್ತು ಕಾಶ್ಮೀರದ (Jammu and Kashmir)ಮಾಜಿ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಹೇಳಿಕೆಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ‘ಪುಲ್ವಾಮಾ ದಾಳಿ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್(Satyapal Mallick) ನೀಡಿರುವ ಹೇಳಿಕೆಯ ಸತ್ಯಾಸತ್ಯತೆಯನ್ನು ಪ್ರಶ್ನಿಸಬೇಕಿದೆ’ ಎಂದು ಹೇಳಿದ್ದಾರೆ.