ಭ್ಯರ್ಥಿಗಳ ಆಯ್ಕೆಗೂ ಮುನ್ನವೇ ಬಿಜೆಪಿಯಲ್ಲಿ (BJP) ಬಂಡಾಯದ ಬಿಸಿ ತಟ್ಟಿದೆ. ಟಿಕೆಟ್ ಆಯ್ಕೆಗೂ ಮುನ್ನವೇ ಅಥಣಿ ಮತಕ್ಷೇತ್ರದಲ್ಲಿ ಅಸಮಾಧಾನ ಭುಗಿಲೆದ್ದಿದೆ. ವಲಸಿಗ ಶಾಸಕ ಕುಮಟಳ್ಳಿಗೆ ಟಿಕೆಟ್ ಸಿಗದಿದ್ದರೆ ರಾಜಕೀಯ ನಿವೃತ್ತಿ ಎನ್ನುತ್ತಿರುವ ಗೋಕಾಕ್ ಸಾಹುಕಾರ ಮತ್ತೊಂದೆಡೆ ಟಿಕೆಟ್ ನನಗೆ ನಾಮಪತ್ರ ಸಲ್ಲಿಕೆ ಬನ್ನಿ ಎಂದು ಸವದಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಬಿಜೆಪಿಗೆ ಇದೀಗ ಅಥಣಿ (Athani) ಕ್ಷೇತ್ರ ತಲೆನೋವು ಎನಿಸಿಕೊಂಡಿದೆ.
ಬಿಜೆಪಿ ಸರ್ಕಾರ ರಚನೆಗೆ ಪ್ರಮುಖ ಪಾತ್ರ ವಹಿಸಿದ ವಲಸಿಗ ಶಾಸಕರು ಹಾಗೂ ಮೂಲ ಬಿಜೆಪಿಗರ ನಡುವಿನ ತಿಕ್ಕಾಟ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಘೋಷಣೆಗೂ ಮುನ್ನವೇ ಭುಗಿಲೆದ್ದಿದೆ. ಬೆಳಗಾವಿ (Belegavi) ಜಿಲ್ಲೆಯ ಅಥಣಿ ಕ್ಷೇತ್ರದಲ್ಲಿ ವಲಸಿಗ ಶಾಸಕ ಮಹೇಶ್ ಕುಮಟಳ್ಳಿ (Mahesh Kumathalli) ಅವರಿಗೆ ಟಿಕೆಟ್ ನೀಡಬೇಡಿ ನನಗೆ ನೀಡಬೇಕು ಎಂದು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ (Laxman Savadi) ಹಠಕ್ಕೆ ಬಿದ್ದಿದ್ದಾರೆ. ಅಥಣಿ ಪಟ್ಟಣದಲ್ಲಿ ಪಂಚಮಸಾಲಿ ಸಮಾವೇಶ ನಡೆಸಿ ಈ ಬಾರಿ ಟಿಕೆಟ್ ನನಗೆ ಸಿಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಜೊತೆಗೆ ಸ್ವ ಪಕ್ಷದ ಶಾಸಕ ಮಹೇಶ್ ಕುಮಟಳ್ಳಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.