ವಿಶ್ವಗುರು ಬಸವಣ್ಣನ ಕರ್ಮಭೂಮಿ ಬಸವಕಲ್ಯಾಣ (Basavakalyan) ಕ್ಷೇತ್ರದಲ್ಲಿ ಎಲ್ಲಾ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು ಬಿಜೆಪಿಯಿಂದ (BJP)ಮತ್ತೊಮ್ಮೆ ಶರಣು ಸಲಗರ್ (Sharanu Salagar) ಅಗ್ನಿ ಪರೀಕ್ಷೆಗೆ ಇಳಿದರೆ ಕಾಂಗ್ರೆಸ್ನಿಂದ (Congress) ಮಾಜಿ ಸಿಎಂ ಎನ್ ಧರಂ ಸಿಂಗ್ (Dharam Singh) ಪುತ್ರ ವಿಜಯ್ ಸಿಂಗ್ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್ನಿಂದ (JDS) ಈಗಾಗಲೇ ಸೈಯದ್ ಯಾಸ್ರಬ್ ಅಲಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
2008ರಲ್ಲಿ ಕ್ಷೇತ್ರ ಪುನರ್ ವಿಂಗಡಣೆಯಿಂದ ಬಸವಕಲ್ಯಾಣ ಕ್ಷೇತ್ರದಲ್ಲಿ ಹುಲಸೂರು ಮತ ಕ್ಷೇತ್ರದ ಕೆಲವು ಗ್ರಾಮಗಳ ವಿಲೀನಗೊಂಡಿದೆ. ಹೀಗಾಗಿ ಕ್ಷೇತ್ರದ ಸ್ವರೂಪವೂ ಬದಲಾಗಿದೆ. ಒಟ್ಟಾರೆ ಬಸವಕಲ್ಯಾಣ ಕ್ಷೇತ್ರ ಜಿಲ್ಲೆಯ ಪ್ರಮುಖ ರಾಜಕೀಯ ಚಟುವಟಿಕೆ ಕೇಂದ್ರವಾಗಿ ಮಾರ್ಪಟ್ಟಿದೆ.