ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಹಿನ್ನೆಲೆಯಲ್ಲಿ ಲಿಂಗಾಯತ ಮತಗಳಿಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಡ್ಯಾಮೇಜ್ ಕಂಟ್ರೋಲ್ ಗೆ ಇಳಿದಿವೆ. ಲಿಂಗಾಯತ ಸಮುದಾಯವನ್ನು ಸೆಳೆಯಲು ನಿರಂತರವಾಗಿ ಕಾಂಗ್ರೆಸ್ ಪ್ರಯತ್ನಿಸುತ್ತಲೇ ಬಂದಿತ್ತು. ಇದೀಗ ಶೆಟ್ಟರ್ ಹಾಗೂ ಸವದಿ ಸೇರ್ಪಡೆಯನ್ನು ಬಳಸಿಕೊಂಡು ಸಮುದಾಯವನ್ನು ಓಲೈಸುವ ಮೂಲಕ ಹಿಂದೆ ಆಗಿದ್ದ ಡ್ಯಾಮೇಜ್ ಸರಿಪಡಿಸಿಕೊಳ್ಳಲು ಸರ್ಕಸ್ ನಡೆಸುತ್ತಿದೆ. ಮತ್ತೊಂದೆಡೆ, ಶೆಟ್ಟರ್ ಹಾಗೂ ಸವದಿ ಅವರು ಪಕ್ಷ ತೊರೆದಿರುವುದರಿಂದ ಉತ್ತರ ಕರ್ನಾಟಕ ಅದರಲ್ಲೂ ವಿಶೇಷವಾಗಿ ಕಿತ್ತೂರು ಕರ್ನಾಟಕದ ಭಾಗದಲ್ಲಿ ಬಿಜೆಪಿಗೆ ನಾಯಕರ ಕೊರತೆ ಎದುರಾಗಬಹುದಾದ ಭೀತಿ ಎದುರಾಗಿದೆ. ಈ ಕೊರತೆಯನ್ನು ನೀಗಿಸಿಕೊಳ್ಳುವ ಮೂಲಕ ಲಿಂಗಾಯತರನ್ನು ಪಕ್ಷದಲ್ಲಿ ಬಲವಾಗಿ ಹಿಡಿದಿಡಲು ಬಿಜೆಪಿ ಕೂಡ ಪ್ರಯತ್ನ ನಡೆಸುತ್ತಿದೆ.
