ಬಿಜೆಪಿ ಸರ್ಕಾರದ ಅಭಿವೃದ್ಧಿ ಕೆಲಸಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ಮತ ಯಾಚಿಸಲಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ ತಿಳಿಸಿದರು. ಬಿಜೆಪಿ ಕಚೇರಿಯಲ್ಲಿ ಪ್ರಧಾನ ಮಂತ್ರಿ ಮೊದಿಯವರೊಂದಿಗೆ ಏರ್ಪಡಿಸಿದ ವರ್ಚುವಲ್ ಸಂವಾದದಲ್ಲಿ ಪಾಲ್ಗೊಂಡು ನಂತರ ಕಾರ್ಯಕರ್ತ ಕುರಿತು ಮಾತನಾಡಿದರು.
ಚುನಾವಣೆ ಸಮೀಪದಲ್ಲಿರುದರಿಂದ ಕಾರ್ಯಕರ್ತರು ತಮ್ಮ ಗ್ರಾಮದ ಪ್ರತಿ ಮನೆ ಮನೆಗೆ ತೆರಳಿ ಕ್ಷೇತ್ರದ ಮತ್ತು ತಮ್ಮ ಹಳ್ಳಿಗಳಲ್ಲಿ ಆಗಿರುವ ಅಭಿವೃದ್ಧಿಗಳ ಬಗ್ಗೆ ಮತದಾರರಲ್ಲಿ ಮನವರಿಕೆ ಮಾಡಿಕೊಟ್ಟು ಬಿಜೆಪಿಗೆ ಮತ ನೀಡುವಂತೆ ಮನವೊಲಿಸಬೇಕು ಎಂದು ಸೂಚಿಸಿದರು. ಕಾರ್ಯಕರ್ತರು ಒಮ್ಮತದಿಂದ ಎಲ್ಲಾರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕು. ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ತಿಳಿಸಿದರು.