ಬಿಜೆಪಿ (BJP) ತೊರೆದು ಕಾಂಗ್ರೆಸ್ (Congress) ಪಕ್ಷವನ್ನು ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಅವರಿಗೆ ಮಾಸ್ಟರ್ ಸ್ಟ್ರೋಕ್ ನೀಡಿದೆ. ಶೆಟ್ಟರ್ನ 27 ಬೆಂಬಲಿಗರನ್ನು (Jagadish Shettar Supporters) ಬಿಜೆಪಿ 6 ವರ್ಷಗಳ ಕಾಲ ಉಚ್ಚಾಟಿಸಿದೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ ಮೇಲೆ ಜಗದೀಶ್ ಶೆಟ್ಟರ್ ಅವರ 27 ಬೆಂಬಲಿಗರಿಗೆ ಬಿಜೆಪಿ ಗೇಟ್ ಪಾಸ್ ನೀಡಿದೆ.
ಬಿಜೆಪಿ ಶಿಸ್ತು ಸಮಿತಿ ಆದೇಶದ ಮೇರೆಗೆ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್ ಚೌಹಾಣ್ 27 ಜನರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ (Expel) ಮಾಡಿ ಆದೇಶ ಹೊರಡಿಸಿದ್ದಾರೆ. ಹುಡಾ ಮಾಜಿ ಅಧ್ಯಕ್ಷ ನಾಗೇಶ್ ಕಲಬುರ್ಗಿ, ಮಲ್ಲಿಕಾರ್ಜುನ್ ಸಾಹುಕಾರ, ವಿರುಪಾಕ್ಷ ರಾಯನಗೌಡರ್, ವಿಜಯಲಕ್ಷ್ಮಿ ತಿಮ್ಮೋಲೆ, ಭಾರತಿ ಟಪಾಲ್, ಇಮ್ತಿಯಾಜ್ ಮುಲ್ಲಾ ಸೇರಿದಂತೆ 27 ಜನರು ಬಿಜೆಪಿಯಿಂದ ಉಚ್ಚಾಟಿತರಾಗಿದ್ದಾರೆ.