ವಿಧಾನಸಭೆ ಚುನಾವಣೆ ಹಿನ್ನೆಲೆ ಪಕ್ಷದಿಂದ ಕಣಕ್ಕಿಳಿಸುವ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ಇಂದು ಬೆಂಗಳೂರಿನಲ್ಲಿ ಬಿಜೆಪಿ ಜಿಲ್ಲಾ ಕೋರ್ ಕಮಿಟಿ ಸಭೆ ನಡೆಸಲಾಗುತ್ತಿದೆ. ನೆಲಮಂಗಲದ ಖಾಸಗಿ ರೆಸಾರ್ಟ್ ನಲ್ಲಿ 2 ದಿನ ನಡೆಯುವ ಈ ಸಭೆಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ನಡೆಯಲಿದ್ದು, ಟಿಕೆಟ್ ಹಂಚಿಕೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅಲ್ಲದೆ, ಇಂದು ವೀಕ್ಷಕರು ಬ್ಯಾಲೆಟ್ ಪೇಪರ್ ಮೂಲಕ ಪ್ರತಿ ಕ್ಷೇತ್ರದಲ್ಲೂ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಮಂಡಲ ಅಧ್ಯಕ್ಷರು, ತಾಲೂಕು ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಪದಾಧಿಕಾರಿಗಳು ರಹಸ್ಯವಾಗಿ ಅಭಿಪ್ರಾಯ ದಾಖಲಿಸಲಿದ್ದಾರೆ. ಬಳಿಕ ಇದನ್ನು ಬೆಂಗಳೂರಿಗೆ ರವಾನೆ ಮಾಡಿ ಸಭೆಯಲ್ಲಿ ಅಭಿಪ್ರಾಯದ ಬಗ್ಗೆ ಚರ್ಚೆ ನಡೆಸಲಾಗುತ್ತದೆ.
