ಮುಂದಿನ 2 ದಿನದಲ್ಲಿ ಮೂರನೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,ಪ್ರಧಾನಿ ಮಂತ್ರಿ, ಅಮಿತ್ ಶಾ ಹಾಗೂ ಅನೇಕ ರಾಷ್ಟ್ರೀಯ ನಾಯಕರ ಪ್ರವಾಸದ ಬಗ್ಗೆ ಚರ್ಚೆ ಮಾಡಿದ್ದೇವೆ, ನಾಮಿನೇಷನ್ ಸಂದರ್ಭದಲ್ಲಿ ಯಾರೆಲ್ಲ ಎಲ್ಲಿ ಇರಬೇಕು, ಅವರ ಜೊತೆಗೆ ಯಾರ್ಯಾರು ಬೇಕು, ಕ್ಷೇತ್ರವಾರು ಏನಲ್ಲ ಆಗುತ್ತಿದೆ ಎಂಬುದರ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಇರುವಂತ ಎಲ್ಲ ಅಭ್ಯರ್ಥಿಗಳ ಜತೆಗೆ ಸಂಪರ್ಕ ಇಟ್ಟುಕೊಂಡಿದ್ದೇವೆ. ಸುದೀರ್ಘ 20 ದಿನಗಳ ಕಾರ್ಯಕ್ರಮದ ಬಗ್ಗೆ ಚರ್ಚೆ ಮಾಡಲಾಗಿದೆ” ಎಂದರು. ಮೂರನೇ ಪಟ್ಟಿ ಬಿಡುಗಡೆ ಹಿನ್ನೆಲೆ ಜಗದೀಶ್ ಶೆಟ್ಟರ್ ಟಿಕೆಟ್ ನಿರೀಕ್ಷೆ ಮಾಡಿರುವ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ, “ಜಗದೀಶ್ ಶೆಟ್ಟರ್ ಸಭೆ ಇತ್ಯಾದಿಗಳೆಲ್ಲದರ ಬಗ್ಗೆಯೂ ಗೊತ್ತಿದೆ. ನಾಳೆ ನಾಡಿದ್ದರಲ್ಲಿ ಮೂರನೇ ಪಟ್ಟಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಈ ವೇಳೆ, ನಾನು ಸತ್ತರೂ ನನ್ನ ಹೆಣ ಬಿಜೆಪಿ ಆಫೀಸ್ಗೆ ಹೋಗಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಅವರು ಸ್ವಲ್ಪ ಎಮೋಷನ್ ಆಗಿದ್ದಾರೆ ಎಂದು ಹೇಳಿದ್ದಾರೆ.