ಅಮೃತಸರದ ಸ್ವರ್ಣ ಮಂದಿರ(Golden Temple)ದ ಬಳಿ ಮೂರನೇ ಬಾರಿಗೆ ಸ್ಫೋಟ ಸಂಭವಿಸಿದೆ. ಪೊಲೀಸ್ ಸಿಬ್ಬಂದಿ ಮತ್ತು ಫೋರೆನ್ಸಿಕ್ ತಂಡದ ಸದಸ್ಯರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಪ್ರಸ್ತುತ ತನಿಖೆ ನಡೆಯುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕಳೆದ ಒಂದು ವಾರದಲ್ಲಿ ಸಂಭವಿಸಿದ ಮೂರನೇ ಸ್ಫೋಟ ಇದಾಗಿದೆ.
ಕಳೆದ ತಿಂಗಳು, ಏಪ್ರಿಲ್ 12 ರಂದು, ಬಟಿಂಡಾ ಮಿಲಿಟರಿ ನಿಲ್ದಾಣದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸೇನಾ ಯೋಧರು ನಿದ್ರೆಯಲ್ಲಿಯೇ ಸಾವನ್ನಪ್ಪಿದ್ದರು. ನಾಲ್ವರು ಯೋಧರನ್ನು ಸಾಗರ್, ಕಮಲೇಶ್, ಸಂತೋಷ್ ಮತ್ತು ಯೋಗೇಶ್ ಎಂದು ಗುರುತಿಸಲಾಗಿದೆ.