ರಾಜ್ಯದಲ್ಲಿ ಈ ಬಾರಿ ಬಿಜೆಪಿ (BJP) 125ರಿಂದ 130 ಸ್ಥಾನಗಳನ್ನು ಗೆದ್ದು ಸ್ವತಂತ್ರವಾಗಿ ಸರ್ಕಾರ ರಚನೆ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (B.S.Yediyurappa) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಿಕಾರಿಪುರದಲ್ಲಿ (Shikaripura) ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಿಂದ ಅತಿ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದು, ಸ್ವತಂತ್ರ ಸರ್ಕಾರ ನಡೆಸುತ್ತೇವೆ.
ಪ್ರಧಾನಿ ಮೋದಿ (Narendra Modi) ಹಾಗೂ ಗೃಹಸಚಿವ ಅಮಿತ್ ಶಾ (Amit Shah) ಅವರಿಗೆ ಕರ್ನಾಟಕದ ಬಗ್ಗೆ ಹೆಚ್ಚು ಆಸಕ್ತಿ ಇದೆ. ನಾವು ಹೆಚ್ಚಿನ ಸ್ಥಾನವನ್ನು ಗೆಲ್ಲಲಿದ್ದೇವೆ ಎಂದರು. ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಗಳು ಹಾಗೂ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳಿಂದ ನಾವು ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ. ಬಿಜೆಪಿ ಬಹುಮತ ಪಡೆದು ಸರ್ಕಾರ ರಚನೆ ಮಾಡುವುದು ಸೂರ್ಯ ಚಂದ್ರರಷ್ಟೇ ಸತ್ಯ. ಎಲ್ಲರ ಆಶೀರ್ವಾದದಿಂದ ಶಿಕಾರಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ (B.Y.Vijayendra) 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಹೇಳಿದರು.