ಕರ್ನಾಟಕ ವಿಧಾನಸಭಾ ಚುನಾವಣೆಗೆ ಸರಿಯಾಗಿ ಒಂದು ವಾರ ಮಾತ್ರ ಬಾಕಿಯಿದೆ. ಈ ಸಮಯದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧಿಸುವ ಪ್ರಸ್ತಾಪ ಮಾಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ಕಾಂಗ್ರೆಸ್ನ ಈ ನಡೆಗೆ ಬಿಜೆಪಿ ಸೇರಿ ಹಿಂದೂ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆ ಕಾಂಗ್ರೆಸ್ಗೆ ಠಕ್ಕರ್ ಕೊಡಲು ಬಜರಂಗದಳ ಮತ್ತು ಹಿಂದೂ ಸಂಘಟನೆಗಳು ಮುಂದಾಗಿವೆ.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ ವಿರೋಧಿಸಿ ಇಂದು ರಾಜ್ಯದ ಎಲ್ಲ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಣವನ್ನು ಬಜರಂಗದಳ ಆಯೋಜಿಸಿದೆ. ಇಂದು ಸಂಜೆ 7 ಗಂಟೆಗೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ನಡೆಯಲಿದ್ದು, ಈ ಮೂಲಕ ಕಾಂಗ್ರೆಸ್ಗೆ ತಿರುಗೇಟು ನೀಡಲು ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಮುಂದಾಗಿದ್ದಾರೆ.