ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನ HAL ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾ ಅವರನ್ನ ಸ್ವಾಗತಿಸಿದ್ದಾರೆ. ರಾಜ್ಯಕ್ಕೆ ಬಿಜೆಪಿಯ ಕೇಂದ್ರ ನಾಯಕರು ಪದೇ ಪದೆ ಭೇಟಿ ನೀಡುತ್ತಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವರು ನಗರಕ್ಕೆ ಆಗಮಿಸಿದ್ದಾರೆ. ಅಮಿತ್ ಶಾ ಅವರು ಬೆಂಗಳೂರಿನ ಕಮ್ಮಘಟ್ಟದಲ್ಲಿ ಇವತ್ತು ಶೇಖರ್ ಸಮೃದ್ಧಿ ಸೌಧದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
