ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಅಕ್ರಮವಾಗಿ ನಿಷೇಧಿತ ಹಪೀಮ್ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಬಂದನ ಮಾಡುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸಿಸಿಬಿ ಎಸಿಪಿ ನಾರಾಯಣ ಭರಮಣಿ ನೇತೃತ್ವದ ತಂಡ ಖಚಿತ ಮಾಹಿತಿಯ ಮೇರೆಗೆ ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿರುವ,
ಹೊಸ ಬಸ್ ನಿಲ್ದಾಣದ ಬಳಿಯಲ್ಲಿ ರಾಜಸ್ಥಾನ ಮೂಲದ ಇಬ್ಬರನ್ನು ಬಂಧನ ಮಾಡಿ ಸುಮಾರು 11,86,000 ಮೌಲ್ಯದ 1186 ಗ್ರಾಂ ಹಪೀಮ್ ವಶಕ್ಕೆ ಪಡೆದಿದ್ದಾರೆ. ಸದ್ಯ ಬಂಧಿತ ಇಬ್ಬರು ಆರೋಪಿಗಳ ಮೇಲೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ,ಸಿಸಿಬಿ ಪೊಲೀಸರ ಕಾರ್ಯಕ್ಕೆ ಕಮೀಷನರ್ ರಮನ್ ಗುಪ್ತಾ ಮೆಚ್ಚುಗೆ ಕೂಡಾ ವ್ಯಕ್ತಪಡಿಸಿದ್ದಾರೆ.