ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ(Darshan thoogudeepa) ಮಾಧ್ಯಮಗಳಿಗೆ ಕೆಟ್ಟ ಕೆಟ್ಟ ಪದಗಳನ್ನು ಬಳಸಿದ್ರು ಅನ್ನೋ ಕಾರಣಕ್ಕೆ ಮಾಧ್ಯಮಗಳಲ್ಲಿ ಅವರ ಬಗ್ಗೆ ಯಾವುದೇ ಸುದ್ದಿಯನ್ನು ಮಾಡದೆ ನಿರ್ಬಂಧ ವಿಧಿಸಲಾಗಿತ್ತು. ಅಂತಿಮವಾಗಿ ಸೋಷಿಯಲ್ ಮೀಡಿಯಾ ಬಳಸಿಕೊಂಡೇ ನಾನು ನನ್ನ ಸಿನಿಮಾ ಪ್ರಚಾರ ಮಾಡ್ತೇನೆ. ಟಿವಿಯವರು ನನಗೆ ಬೇಕಿಲ್ಲ ಎಂದು ಬಹಿರಂಗವಾಗಿಯೇ ಹೇಳಿದ್ದರು. ಪದೇ ಪದೇ ಟಿವಿ ಮೀಡಿಯಾ ಟಾರ್ಗೆಟ್ ಮಾಡಿ ಮಾತನಾಡುತ್ತಲೇ ಇದ್ದರು. ಇದೀಗ (actor darshan) ನಟ ದರ್ಶನ್ ಟಿವಿ ಮಾಧ್ಯಮಗಳ ಎದುರು ಮಂಡಿಯೂರಿದ್ರಾ ಅನ್ನೋ ಅನುಮಾನ ಕಾಡುತ್ತಿದೆ. ಮಾಧ್ಯಮ ಕಚೇರಿಗಳಿಗೆ ಪತ್ರವೊಂದು ಬಂದಿದ್ದು, ಈ ಹಿಂದೆ ನಡೆದ ಘಟನೆಗಳಿಗೆ ವಿಷಾಧ ವ್ಯಕ್ತಪಡಿಸುತ್ತೇನೆ. ಇನ್ಮುಂದೆ ಎಲ್ಲರೂ ಒಟ್ಟಾಗಿ ಹೋಗೋಣ
75 ವರ್ಷಗಳ ಇತಿಹಾಸವಿರುವ ಕನ್ನಡ ಚಿತ್ರರಂಗದಲ್ಲಿ ಅಳಿಸಲಾಗದ ಕೆಲವು ವ್ಯಕ್ತಿಗಳು ಮತ್ತು ಕೆಲವು ಹೆಸರುಗಳು ಮಾತ್ರ ಚರಿತ್ರೆಯಲ್ಲಿ ಉಳಿದಿರುತ್ತವೆ. ಆ ಸಾಲಿನಲ್ಲಿ ಡಾ. ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಂಕರ್ ನಾಗ್, ತೂಗುದೀಪ ಶ್ರೀನಿವಾಸ್, ಬಾಲಕೃಷ್ಣ, ದಿನೇಶ್, (Dr. Raj Kumar, Vishnuvardhan, Ambarish, Shankar Nag, Thugudeep Srinivas, Balakrishna) ಇವರ ಸಮಕಾಲೀನ ದಿಗ್ಗಜರುಗಳನ್ನು ಕರ್ನಾಟಕದ ಜನರು ಮಚ್ಚಿಕೊಂಡು ಮೆರೆಸಿದರು ಒಪ್ಪುವ ಮಾಧ್ಯಮಗಳು ಮತ್ತು ದೃಶ್ಯ ಮಾಧ್ಯಮಗಳು ಪ್ರೋತ್ಸಾಹಿಸಿರುತ್ತೀರಿ. ಈ ಸಾಲಿನಲ್ಲಿ ಇದ್ದಂತಹ ಕನ್ನಡ ಚಿತ್ರರಂಗ ಮರೆಯಲಾಗದಂತಹ ನಟ ತೂಗುದೀಪ ಶ್ರೀನಿವಾಸ್ (Thugudeep Srinivas) ರವರ ಕುಟುಂಬದಿಂದ ಬಂದಂತಹ ಸಣ್ಣ ಕುಡಿ ನಾನು ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದಾಗ ನನ್ನನ್ನು ಆಶೀರ್ವದಿಸಿ ಪ್ರೋತ್ಸಾಹಿಸಿ ಹಲವಾರು ಬಾರಿ ನಾನು ಮಾಡಿರುವ ಪಾತ್ರಗಳ ಬಗ್ಗೆ ವಿಶ್ಲೇಷಣೆ ಮಾಡಿ, ನನ್ನ ಪಾತ್ರದಲ್ಲಿರುವ ತಪ್ಪುಗಳನ್ನು ತಿದ್ದಿ ಹೇಳಿರುವಿರಿ.
ನಾನು ಸಹ ಮುಂದಿನ ದಿನಗಳಲ್ಲಿ ಮಾಡಿರುವಂತ ಚಿತ್ರಗಳಲ್ಲಿ ನನ್ನ ಪಾತ್ರಗಳಲ್ಲಿ ಬರುವ ತಪ್ಪುಗಳ ಬಗ್ಗೆ ಎಚ್ಚೆತ್ತುಕೊಂಡು ಉತ್ತಮ ಚಿತ್ರಗಳನ್ನು ಆಯ್ಕೆ ಮಾಡಿಕೊಂಡಿದ್ದೇನೆ. ಅದೇ ರೀತಿಯಲ್ಲಿ ನಿಜ ಜೀವನದಲ್ಲಿ ಸಹ ಯಾವುದೋ ಒಂದು ಗಳಿಗೆಯಲ್ಲಿ, ಕೆಲವು ಆಚಾತುರ್ಯದಿಂದ ಮಾತನಾಡಿರುತ್ತೇನೆ. ಮಾಧ್ಯಮ ಸಹೋದರರಿಗೆ-ಸಹೋದರಿಯರಿಗೆ(To the media brothers and sisters) ನೋವು ಉಂಟಾಗಿರುವುದರಿಂದ ಅದನ್ನು ನಾನು ವಿಷಾದಿಸುತ್ತೇನೆ. ಜೀವನವೆಂಬುದು ಬಹಳ ಆಮೂಲ್ಯ ಹಾಗೂ ತುಂಬಾ ಚಿಕ್ಕದ್ದು, ಈ ಚಿಕ್ಕ ಸಮಯದಲ್ಲಿ ನಗು ನಗುತಾ ಬಾಳೋಣ. ನನ್ನ ಈ ಭಾವನೆಯನ್ನು ನನ್ನ ಎಲ್ಲಾ ಮಿತ್ರರು ಹಾಗೂ ಅಭಿಮಾನಿಗಳು ಅರ್ಥ ಮಾಡಿಕೊಂಡು ಗೌರವಿಸಬೇಕು ಎಂದು ಮನವಿ ಮಾಡಿದ್ದಾರೆ.