ದೊಡ್ಡಬಳ್ಳಾಪುರ: ಬಿಜೆಪಿ ಬಿಡುಗಡೆ ಮಾಡಿರುವ ಕದನಕಲಿಗಳ ಪಟ್ಟಿಯಲ್ಲಿ ದೊಡ್ಡಬಳ್ಳಾಪುರ ದಿಂದ ಧೀರಜ್ ಮುನಿರಾಜು ಗೆ ಟಿಕೇಟ್ ದಕ್ಕಿದ್ದು, ದೊಡ್ಡಬಳ್ಳಾಪುರ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೇಟ್ ಗಾಗಿ 6 ಮಂದಿ ಆಕಾಂಕ್ಷಿಗಳಿದ್ದು, ಇವರಲ್ಲಿ ಅತ್ಯಂತ ಕಿರಿಯ ವಯಸ್ಸಿನ ಧೀರಜ್ ಮುನಿರಾಜು ಗೆ ಟಿಕೇಟ್ ಸಿಕ್ಕಿದೆ. ಧೀರಜ್ ಮುನಿರಾಜು ಮನೆ ಬಳಿ ತೆರಳಿದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.