ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಆರಂಭದಿಂದಲೂ ಸಮಂತಾ ಗೆಲುವಿನ ನಗೆ ಬೀರುತ್ತಿದ್ದಾರೆ. ಅದರಲ್ಲೂ ಅಲ್ಲು ಅರ್ಜುನ್ ಜೊತೆ ‘ಪುಷ್ಪ’ ಚಿತ್ರದ ಐಟಂ ಸಾಂಗ್ ನಲ್ಲಿ ಸೊಂಟ ಬಳುಕಿಸಿದ್ದು ಸಮಂತಾಗೆ ಮತ್ತಷ್ಟು ಖ್ಯಾತಿ ತಂದುಕೊಟ್ಟಿತ್ತು. ಬಳಿಕ ಯಶೋದ ಚಿತ್ರದಲ್ಲಿ ನಟಿಸಿ ಸಕ್ಸಸ್ ಕಂಡಿದ್ದರು. ಹೀಗಾಗಿ ಸಹಜವಾಗಿ ‘ಶಾಕುಂತಲಂ’ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆಯಿತ್ತು. ಆದರೆ ಈ ಸಿನಿಮಾ ಎಲ್ಲಾ ಲೆಕ್ಕಾಚಾರ ತಲೆ ಕೆಳಗಾಗುವಂತೆ ಮಾಡಿದೆ. ಸಂದರ್ಶನವೊಂದರಲ್ಲಿ ‘ಶಾಕುಂತಲಂ’ ಸಿನಿಮಾ ಸೋಲಿನ ಬಗ್ಗೆ ನಿರ್ಮಾಪಕ ದಿಲ್ ರಾಜು ಮಾತನಾಡಿದ್ದಾರೆ. ನಾನು 50ಕ್ಕೂ ಅಧಿಕ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದೇನೆ. ನಾಲ್ಕರಿಂದ ಐದು ಸಿನಿಮಾಗಳು ಮಾತ್ರ ನನಗೆ ಆರ್ಥಿಕವಾಗಿ ಹೊರೆಯಾಗಿವೆ. ನನ್ನ 25 ವರ್ಷಗಳ ಕೆರಿಯರ್ನಲ್ಲಿ ‘ಶಾಕುಂತಲಂ’ ಸಿನಿಮಾ ದೊಡ್ಡ ಹೊಡೆತ ನೀಡಿತು ಎಂದಿದ್ದಾರೆ. ಯಶಸ್ಸು ಸಿಕ್ಕಿಲ್ಲ ಅಂದರೆ ನಾನು ಅದನ್ನು ಒಪ್ಪಿಕೊಳ್ಳುತ್ತೇನೆ. ಜನರಿಗೆ ಸಿನಿಮಾ ಇಷ್ಟ ಆದರೆ ಅದನ್ನು ಸೆಲೆಬ್ರೇಟ್ ಮಾಡುತ್ತಾರೆ. ಒಂದೊಮ್ಮೆ ಅವರು ಸೆಲಬ್ರೆಟ್ ಮಾಡಿಲ್ಲ ಎಂದರೆ ನನ್ನ ಜಡ್ಜ್ಮೆಂಟ್ ತಪ್ಪಾಗಿದೆ ಎಂದರ್ಥ ಎಂದು ದಿಲ್ ರಾಜು ಹೇಳಿದ್ದಾರೆ.