2023ರ ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದ ವಿಶ್ವಾಸದಲ್ಲಿದೆ. ಈ ನಡುವೆಯೇ ಸಿಎಂ ಗಾದಿ ಮೇಲೆ ಕಣ್ಣಿಟ್ಟಿರುವ ಡಿಕೆಶಿ ಮಾವಾಸ್ಯೆ ಪೂಜೆ ನೆಪದಲ್ಲಿ ಕಾಲಭೈರವೇಶ್ವರನ ಮೊರೆ ಹೋಗಿದ್ದಾರೆ.
2023ರ ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿದೆ. ಸತಾಯಗತಾಯ ಚುನಾವಣೆ ಗೆಲ್ಲಲೇಬೇಕೆಂದು ಎಲ್ಲಾ ರಾಜಕೀಯ ಪಕ್ಷಗಳು ರಾಜಕೀಯ ತಂತ್ರಗಾರಿಕೆಯಲ್ಲಿ ತೊಡಗಿವೆ. ಕೆಪಿಸಿಸಿ ಅಧ್ಯಕ್ಷರಾದ ನಂತರ ಡಿ.ಕೆ.ಶಿವಕುಮಾರ್, ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ರಾಜ್ಯ ಸುತ್ತುತ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರುವ ಜೊತೆಗೆ ಸಿಎಂ ಆಗಲೇಬೇಕೆಂದು ಪಣತೊಟ್ಟಿರುವ ಡಿಕೆಶಿ, ದೇವರ ಮೊರೆ ಹೋಗಿದ್ದಾರೆ. ಯುಗಾದಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಇಂದು ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಭೇಟಿ ನೀಡಿದ್ದು, ಶ್ರೀಕಾಲಭೈರವೇಶ್ವರನ ದರ್ಶನ ಪಡೆದು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ್ದಾರೆ.