ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಟೋ ಚಾಲಕರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಗುರುವಾರ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಇದು ನನ್ನ ಜೀವನದಲ್ಲಿ ಬಹಳ ನೆನಪಿನಲ್ಲಿ ಉಳಿಯಲಿರುವ ದಿನ. ಕಾರಣ ಇಂದು ನಾನು ಪವಿತ್ರ ಆಟೋ ಚಾಲನೆ ಮಾಡಿದ ದಿನ. ನಿಮ್ಮ ಕುಟುಂಬದ ಸದಸ್ಯನಾಗಿ ನಾನು ಇಲ್ಲಿ ನಿಂತಿದ್ದೇನೆ. ಇದಕ್ಕಾಗಿ ನನಗೆ ಹೆಮ್ಮೆ ಇದೆ. ನೀವು ಸ್ವಾಭಿಮಾನದ ಬದುಕು ನಡೆಸುತ್ತಿದ್ದೀರಿ. ನೀವು ದೇಶ ಹಾಗೂ ಜನ ಸೇವಕರು. ಮಧ್ಯಮವರ್ಗ ಹಾಗೂ ಜನ ಸಾಮಾನ್ಯರ ಸಾರಥಿಗಳು.