ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ ಬಿಜೆಪಿಯ ಆಂತರಿಕ ಕುತಂತ್ರ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ಯಡಿಯೂರಪ್ಪ ಸಿಎಂ ಅಲ್ಲ. ಸರ್ಕಾರದ ಪ್ರತಿನಿಧಿಯಾಗಿ ಭಾಗಿಯಾಗಿಲ್ಲ. ಮೀಸಲಾತಿ ವಿಚಾರದಲ್ಲಿ ಸಿಎಂ ದೊಡ್ಡ ಗೊಂದಲ ಕ್ರಿಯೇಟ್ ಮಾಡಿದ್ದಾರೆ ಎಂದರು.
ಯಡಿಯೂರಪ್ಪರನ್ನ ಮೊದಲು ಸೈಡ್ ಲೈನ್ ಮಾಡಿದ್ರು.ಈಗ ಅಮಿತ್ ಶಾ ಬಂದು ಟಿಫನ್ ಮಾಡಿ ಮತ್ತೆ ಅವರನ್ನು ಮುಂದೆ ತಂದಿದ್ದಾರೆ. ಯಡಿಯೂರಪ್ಪಗೆ ಬೆನ್ನು ತಟ್ಟಿ ಬಂದಿದ್ದಾರೆ. ಮತ್ತೊಂದು ಕಡೆಯಲ್ಲಿ ಯಡಿಯೂರಪ್ಪ ಮನೆ ಮೇಲೆ ಕಲ್ಲು ಹೊಡೆಯುತ್ತಾರೆ ಅಂದರೆ ಕಾರಣ ಏನು? ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.