ದೊಡ್ಡಬಳ್ಳಾಪುರ: ಪ್ರತಿ ರಾಜ್ಯಗಳ ವಿಧಾನಸಭೆ ಚುನಾವಣೆ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆ ವೇಳೆ ಇತರೆ ರಾಜಕೀಯ ಪಕ್ಷಗಳಿಗಿಂತ ವಿಭಿನ್ನವಾಗಿ, ಸಾಮಾಜಿಕ ನ್ಯಾಯದೊಂದಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪಕ್ಷ ಬಿಜೆಪಿಯಾಗಿದೆ. ಈ ಬಾರಿ ದೇಶಕ್ಕೆ ಕರ್ನಾಟಕ ಮಾಡೆಲ್ ರೀತಿಯಲ್ಲಿ ಅಭ್ಯರ್ಥಿಗಳನ್ನು ಪಕ್ಷ ಘೋಷಣೆ ಮಾಡಿದೆ ಎಂದು ಕ್ಷೇತ್ರದ ಅಭ್ಯರ್ಥಿ ಧೀರಜ್ ಮುನಿರಾಜು ತಿಳಿಸಿದರು.
ನಗರದಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಬಾರಿ ಓರ್ವ ಸಾಮಾನ್ಯ ಕಾರ್ಯಕರ್ತನನ್ನು ಪಕ್ಷದ ವರಿಷ್ಠರು ಗುರುತಿಸಿ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಪಕ್ಷದ ಸಂಸದೀಯ ಮಂಡಳಿಗೆ ಧನ್ಯವಾದ. ಕಾರ್ಯಕರ್ತರೆ ಸೃಷ್ಟಿ ಮಾಡಿದ ಅಭ್ಯರ್ಥಿಯಾಗಿ ನಾನು ಆಯ್ಕೆಯಾಗಿದ್ದೇನೆ.