ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ (BJP) ಕೊನೆವರೆಗೂ ಉಳಿಸಿಕೊಂಡಿದ್ದ ಎರಡು ಕ್ಷೇತ್ರಗಳಿಗೆ ಕೊನೆಗೂ ಅಭ್ಯರ್ಥಿಗಳನ್ನು ಘೋಷಿಸಿದೆ. ಶಿವಮೊಗ್ಗ (Shivamogga) ಕ್ಷೇತ್ರಕ್ಕೆ ಚನ್ನಬಸಪ್ಪ ಹಾಗೂ ಮಾನ್ವಿ ಕ್ಷೇತ್ರಕ್ಕೆ ಬಿ.ವಿ.ನಾಯಕ್ ಅವರನ್ನು ಹುರಿಯಾಳುಗಳನ್ನಾಗಿಸಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್ ಚನ್ನಬಸಪ್ಪಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡಿದೆ.
ಈಶ್ವರಪ್ಪ ನಿವೃತ್ತಿ ಘೋಷಣೆ ಮಾಡಿದ್ದು, ಪುತ್ರನಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಈಗ ಈಶ್ವರಪ್ಪಗೆ (Eshwarappa) ಹೈಕಮಾಂಡ್ ಶಾಕ್ ನೀಡಿದೆ. ಈಶ್ವರಪ್ಪ ಪುತ್ರ ಕಾಂತೇಶ್ಗೆ ಟಿಕೆಟ್ ಕೈತಪ್ಪಿದ್ದು, ಚನ್ನಬಸಪ್ಪಗೆ ಮಣೆ ಹಾಕಲಾಗಿದೆ. ಬಿ.ವಿ.ನಾಯಕ್ ಅವರು ನಿನ್ನೆಯಷ್ಟೇ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಯಾಗಿದ್ದರು. ನಾಯಕ್ಗೆ ಟಿಕೆಟ್ ಗಿಟ್ಟಿಸಿಕೊಡುವಲ್ಲಿ ಸಚಿವ ಶ್ರೀರಾಮುಲು ಯಶಸ್ವಿಯಾಗಿದ್ದಾರೆ.