ಬಹಳ ವರ್ಷಗಳಿಂದ ಕಾಂಗ್ರೆಸ್-ಬಿಜೆಪಿ ನಡುವೆ ಒಳ ಒಪ್ಪಂದವಿದೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯಲ್ಲಿ ಮಾತನಾಡಿದ ಅವರು, ಆಪರೇಷನ್ ಕಮಲ ಆದಾಗಿಂದಲೂ ಇದೆಲ್ಲ ನಡೆಯುತ್ತಲೇ ಇದೆ. ಯಾವ ರೀತಿಯ ಒಪ್ಪಂದ ಮಾಡಿಕೊಂಡಿದ್ದಾರೆಂದು ತಿಳಿಯುತ್ತಿದೆ.
ಕಳೆದ ಲೋಕಸಭಾ ಚುನಾವಣೆ ವೇಳೆ ಒಳಒಪ್ಪಂದ ಮಾಡಿಕೊಂಡರು. ಬಿಜೆಪಿ, ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡು JDS ಸೋಲಿಸಿದರು. ಮಂಡ್ಯ ಜಿಲ್ಲೆಯಲ್ಲಿ ಮತ್ತೆ ಕುತಂತ್ರ ರಾಜಕಾರಣಕ್ಕೆ ಮುಂದಾಗಿದ್ದಾರೆ. ಜೆಡಿಎಸ್ ವಿರುದ್ಧ ಬಿಜೆಪಿ-ಕಾಂಗ್ರೆಸ್ ಎರಡೂ ಪಕ್ಷಗಳಿಂದ ಕುತಂತ್ರ ನಡೆಯುತ್ತಿದೆ. ಕಾಂಗ್ರೆಸ್, ಬಿಜೆಪಿ, ರೈತ ಸಂಘ ಒಗ್ಗೂಡಿ ಜಿಲ್ಲೆಯ ಜನತೆಗೆ ದ್ರೋಹ ಮಾಡುತ್ತಿದ್ದಾರೆ.