ಮೊದಲ ದಿನದಾಟವೇ ಮುಖ್ಯ

ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಮೂರು ಪಂದ್ಯಗಳು ಮೂರೇ ದಿನಕ್ಕೆ ಮುಕ್ತಾಯವಾಗಿದೆ. ಅಹಮದಾಬಾದ್ ಟೆಸ್ಟ್ ಕೂಡ 5 ದಿನ ನಡೆಯುತ್ತದೆ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ. ಅದರಲ್ಲೂ ಮೊದಲನೇ ದಿನದಾಟವೇ ಪಂದ್ಯ ರೋಚಕವಾಗಿರುವುದರಿಂದ ಮೊದಲನೇ ದಿನದ ಆಟವನ್ನು ಮೈದಾನದಲ್ಲಿ ಕಣ್ತುಂಬಿಕೊಳ್ಳಲು ಕಾಯುತ್ತಿದ್ದ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.

ಆದರೂ, ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಯಾವ ಸಮಯಕ್ಕೆ ಮೈದಾನದಲ್ಲಿ ಹಾಜರಿರುತ್ತಾರೆ ಎನ್ನುವುದು ಇನ್ನೂ ಖಚಿತವಾಗಿಲ್ಲ. ಇವರಿಬ್ಬರ ಭೇಟಿಯ ಸಮಯವನ್ನು ನೋಡಿಕೊಂಡು ಮುಂದಿನ ದಿನಗಳಲ್ಲಿ ಮೊದಲನೇ ದಿನದ ಟಿಕೆಟ್ ಮಾರಾಟಮಾಡುವ ಸಾಧ್ಯತೆ ಇದೆ.

ಗೆಲ್ಲಲೇಬೇಕಿದೆ ಭಾರತ ತಂಡ

ಮೂರನೇ ಟೆಸ್ಟ್‌ ಪಂದ್ಯವನ್ನು ಸೋತ ಬಳಿಕ ಭಾರತ ತಂಡ ಅಹಮದಾಬಾದ್‌ನಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ವಿಶ್ವ ಟೆಸ್ಟ್‌ಚಾಂಪಿಯನ್‌ಶಿಪ್‌ ಫೈನಲ್‌ಗೆ ನೇರವಾಗಿ ಅರ್ಹತೆ ಪಡೆದುಕೊಳ್ಳಬೇಕೆಂದರೆ ಭಾರತ ಈ ಪಂದ್ಯವನ್ನು ಗೆಲ್ಲಲೇಬೇಕಾಗಿದೆ.

ನಾಲ್ಕನೇ ಟೆಸ್ಟ್ ಪಂದ್ಯಕ್ಕಾಗಿ ಬ್ಯಾಟರ್ ಗಳಿಗೆ ನೆರವಾಗುವಂತ ಪಿಚ್ ನಿರ್ಮಾಣ ಮಾಡುವ ಸಾಧ್ಯತೆ ಇದ್ದು, ಈ ಪಂದ್ಯವಾದರು 5 ದಿನ ನಡೆಯಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.