ಕೇಲ್ ಮೇಯರ್ಸ್ (Kyle Mayers) ಜವಾಬ್ದಾರಿಯುತ ಬ್ಯಾಟಿಂಗ್ ಹಾಗೂ ಸಂಘಟಿತ ಬೌಲಿಂಗ್ ದಾಳಿ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ (Lucknow Super Giants) ತಂಡವು ರಾಜಸ್ಥಾನ್ ರಾಯಲ್ಸ್ (Rajasthan Royals) ವಿರುದ್ಧ 10 ರನ್ಗಳ ಜಯ ಸಾಧಿಸಿದೆ. ಆದರೆ ಸತತ ಜಯದ ಹಾದಿಯಲ್ಲಿ ಮುನ್ನುಗ್ಗುತ್ತಿದ್ದ ರಾಜಸ್ಥಾನ್ ರಾಯಲ್ಸ್ ತಂಡ ತವರಿನಲ್ಲಿ ಸೋತು ಮುಖಭಂಗ ಅನುಭವಿಸಿದೆ.
ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಕ್ರೀಸ್ಗಿಳಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು. 155 ರನ್ಗಳ ಗುರಿ ಬೆನ್ನತ್ತಿದ್ದ ರಾಜಸ್ಥಾನ್ ರಾಯಲ್ಸ್ ನಿಗದಿತ 20 ಓವರ್ಗಳಲ್ಲಿ 144 ರನ್ ಗಳಿಸಲಷ್ಟೇ ಸಾಧ್ಯವಾಗಿ ಸೋಲೊಪ್ಪಿಕೊಂಡಿತು.