ಬ್ಯಾಟರ್ ಗಳ ಸ್ಫೋಟಕ ಆಟ ಮತ್ತು ಬೌಲರ್ಗಳ ಉತ್ತಮ ಬೌಲಿಂಗ್ ಪ್ರದರ್ಶದಿಂದ ಮುಂಬೈ ಇಂಡಿಯನ್ಸ್ (Mumbai Indians) ವಿರುದ್ಧ ಗುಜರಾತ್ ಟೈಟಾನ್ಸ್ (Gujarat Titans) 55 ರನ್ಗಳ ಜಯ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 6 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಮುಂಬೈ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿ ಸೋಲೊಪ್ಪಿಕೊಂಡಿತು.
ಮುಂಬೈ ತಂಡ ಆರಂಭದಲ್ಲೇ ನಾಯಕ ರೋಹಿತ್ ಶರ್ಮಾ (Rohith Sharma) ವಿಕೆಟ್ ಕಳೆದುಕೊಂಡಿತು. 59 ರನ್ಗಳಿಸುವಷ್ಟರಲ್ಲಿ ಪ್ರಮುಖ 5 ವಿಕೆಟ್ ಕಳೆದುಕೊಂಡಿತ್ತು. ಕ್ಯಾಮರೂನ್ ಗ್ರೀನ್ 33 ರನ್(26 ಎಸೆತ, 3 ಸಿಕ್ಸರ್), ಸೂರ್ಯಕುಮಾರ್ ಯಾದವ್ 23 ರನ್ (12 ಎಸೆತ, 3 ಬೌಂಡರಿ,1 ಸಿಕ್ಸರ್), ನೆಹಾಲ್ ವಧೇರಾ 40 ರನ್ (21 ಎಸೆತ, 3 ಬೌಂಡರಿ, 3 ಸಿಕ್ಸರ್) ಸಿಡಿಸಿ ಸ್ವಲ್ಪ ಪ್ರತಿರೋಧ ತೋರಿದರು. ನೂರ್ ಅಹ್ಮದ್ 3 , ರಶೀದ್ ಖಾನ್ ಮತ್ತು ಮೋಹಿತ್ ಶರ್ಮಾ ತಲಾ 2, ಹಾರ್ದಿಕ್ ಪಾಂಡ್ಯ 1 ವಿಕೆಟ್ ಪಡೆದರು.