ರಿಂಕು ಸಿಂಗ್ (Rinku Singh), ನಾಯಕ ನಿತೀಶ್ ರಾಣಾ (Nitish Rana) ಸಂಘಟಿತ ಬ್ಯಾಟಿಂಗ್ ಹಾಗೂ ಸಂಘಟಿತ ಬೌಲಿಂಗ್ ದಾಳಿ ನೆರವಿನಿಂದ ಕೋಲ್ಕತ್ತಾ ನೈಟ್ರೈಡರ್ಸ್ (Kolkata Knight Riders) ತಂಡವು ಸನ್ ರೈಸರ್ಸ್ ಹೈದರಾಬಾದ್ (Sunrisers Hyderabad) ವಿರುದ್ಧ 5 ರನ್ಗಳ ರೋಚಕ ಜಯ ಸಾಧಿಸಿತು.
ಇಲ್ಲಿನ ರಾಜೀವ್ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ರೈಡರ್ಸ್ ತಂಡ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತ್ತು. ಗೆಲುವಿಗೆ 172 ರನ್ ಗುರಿ ಪಡೆದ ಸನ್ ರೈಸರ್ಸ್ ಹೈದರಾಬಾದ್ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿ ಸೋಲೊಪ್ಪಿಕೊಂಡಿತು.