ಹಿರಿಯೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ರವೀಂದ್ರಪ್ಪ ಅವರ ನಿವಾಸದ ಮೇಲೆ ಐಟಿ ಮತ್ತು ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚೀಫ್ ಇಂಜಿನಿಯರ್ ಆಗಿದ್ದ ಎಂ.ರವೀಂದ್ರಪ್ಪ ಅವರು ಹಿರಿಯೂರು ಕ್ಷೇತ್ರದ ಜೆಡಿಎಸ್ ಟಿಕೆಟ್ ಪಡೆದು, ನಾಮಪತ್ರ ಸಲ್ಲಿಸಿ, ಚುನಾವಣಾ ಮತಪ್ರಚಾರದಲ್ಲಿ ತೊಡಗಿದ್ದಾರೆ.
ಹಿರಿಯೂರು ತಾಲೂಕಿನ ಧರ್ಮಪುರ ಹೋಬಳಿಯ ಮುಂಗಸವಳ್ಳಿ ಗ್ರಾಮದ ತೋಟದಲ್ಲಿರುವ ನಿವಾಸಕ್ಕೆ ಭೇಟಿ ನೀಡಿರುವ ಚುನಾವಣಾ ಅಧಿಕಾರಿಗಳು ರವೀಂದ್ರಪ್ಪನಿಗಾಗಿ ಕಾದು ಕುಳಿತಿದ್ದಾರೆ.ಇನ್ನು ಅಭ್ಯರ್ಥಿ ಎಂ.ರವೀಂದ್ರಪ್ಪ ಅವರು ಶ್ರೀ ಕ್ಷೇತ್ರ ಪಟ್ಟನಾಯಕನಹಳ್ಳಿ ಸ್ಪಟಿಕ ಪುರಿ ಶ್ರೀ ನಂಜಾವಧೂತ ಶ್ರೀಗಳ ಹುಟ್ಟು ಹಬ್ಬ ಇರುವುದರಿಂದ, ಶ್ರೀಗಳ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿ, ಆಶಿರ್ವಾದ ಪಡೆಯಲು ಮಠಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಆದ್ದರಿಂದ ರವೀಂದ್ರಪ್ಪನಿಗಾಗಿ ಐಟಿ ಅಧಿಕಾರಿಗಳು ಕಾದು ಕುಳಿತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.