ತಾಲೂಕಿನ ಐತಿಹಾಸಿಕ ಸೋಮೇಶ್ವರ ಜಾತ್ರೆಯಲ್ಲಿ ಚುನಾವಣಾ ಆಯೋಗ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯತಿ ಸ್ವೀಪ್ ಸಮಿತಿ ಮತ್ತು ಜೆಸಿಐ ಕಂಪ್ಲಿ ಸೋನಾ ಇವರ ಸಂಯುಕ್ತಾಶ್ರಯದಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಅಂಗವಾಗಿ ಸೋಮಪ್ಪ ಜಾತ್ರೆಯಲ್ಲಿ ಭಾಗಿಯಾಗುವ ಸಾರ್ವಜನಿಕರು ಹಾಗೂ ಮತದಾರರಿಗೆ ಮತದಾನದ ಜಾಗೃತಿಯ ಕಾರ್ಯಕ್ರಮವು ಜರುಗಿತು.
ಜೆಸಿಐ ಕಂಪ್ಲಿ ಸೋನಾ ಮತ್ತು ಕಂಪ್ಲಿ ತಾಲೂಕು ಸ್ವೀಪ್ ಸಮಿತಿಯ ನೇತೃತ್ವದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿ ಜಾಗೃತಿ ಮೂಡಿಸಲಾಯಿತು.
ಜಾಗೃತಿ ಗೀತೆಗಳೊಂದಿಗೆ ಜಾಥಾವು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಜಾಥಾಕ್ಕೆ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್.ಮಲ್ಲನಗೌಡ ಚಾಲನೆ ನೀಡಿದರು. ಮತದಾನ ಜಾಗೃತಿಯ ಪ್ರತಿಜ್ಞಾವಿಧಿ ಬೋಧಿಸಿ ಬಳಿಕ ಮಾತನಾಡಿದ ಅವರು, ಯುವಕರು, ವೃದ್ಧರು, ವಿಕಲಚೇತನ ಮತದಾರರು ನಿರ್ಭೀತಿಯಿಂದ ಮತ ಚಲಾಯಿಸಬೇಕು. ಶೇ.100 ರಷ್ಟು ಮತ ಚಲಾಯಿಸಿ ಯೋಗ್ಯ ಹಾಗೂ ಸಮರ್ಥ ನಾಯಕನನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.