ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನಾಗಿ ಪ್ರಭಾಕರ ರೆಡ್ಡಿ ಅವರನ್ನು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಘೋಷಿಸಿದ್ದಾರೆ. ಜೆಪಿ ಭವನದಲ್ಲಿ ಘೋಷಣೆ ಮಾಡಿ ಮಾತನಾಡಿದ ಅವರು, ರಾಜಗೋಪಾಲರೆಡ್ಡಿ ಅವರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಬೇಕೆಂದು ಹಲವಾರು ವರ್ಷಗಳಿಂದ ಅವರ ಸಂಪೂರ್ಣ ಕುಟುಂಬ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಸಮಯವನ್ನು ಮೀಸಲಿಟ್ಟು ಶಕ್ತಿಯನ್ನು ತುಂಬಿದ್ರು. ಅಭ್ಯರ್ಥಿಯನ್ನು ನೇಮಕ ಮಾಡುವಾಗ ಅವರನ್ನು ಕಡೆಗಣಿಸಿದ್ದು, ಅವರ ಜೊತೆ ಮುಕ್ತವಾಗಿ ಚರ್ಚೆ ಮಾಡದೇ ತೀರ್ಮಾನ ಮಾಡಿರುವುದು ಅವರ ಮನಸ್ಸಿನ ಮೇಲೆ ಪರಿಣಾಮ ಬೀರಿದೆ. ಹೀಗಾಗಿ, ಇದೆಲ್ಲವನ್ನು ಚರ್ಚೆ ಮಾಡಿ ನಾನೇ ಖುದ್ದು ಅವರಿಗೆ ದೂರವಾಣಿ ಕರೆ ಮುಖಾಂತರ ಮಾತನಾಡಿದೆ. 2 ದಿನಗಳ ಸಮಯ ತೆಗೆದುಕೊಂಡಿದ್ರು. ಬುಧವಾರ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿಂದೆ ಪ್ರಭಾಕರ ರೆಡ್ಡಿ ಕ್ಷೇತ್ರದಲ್ಲಿ ಹೆಚ್ಚು ಉತ್ಸಾಹದಿಂದ ಕಾಣಿಸಿಕೊಳ್ಳದೇ ಇದ್ದಿದ್ದರಿಂದ ಬದಲಾದ ಸನ್ನಿವೇಶದಲ್ಲಿ ರಾಜಗೋಪಾಲರೆಡ್ಡಿ ಹೆಸರನ್ನು ಘೋಷಿಸಲಾಗಿದೆ ಎಂದು ಹೇಳಿದ್ದಾರೆ. ಜೆಡಿಎಸ್ ಮತ್ತು ರಾಜಗೋಪಾಲರೆಡ್ಡಿ ಕುಟುಂಬ ಒಟ್ಟಾಗಿ ಸೇರಿದಾಗ ಬೆಂಗಳೂರು ದಕ್ಷಿಣ ಕ್ಷೇತ್ರ ಅಷ್ಟೇ ಅಲ್ಲ, ಬೊಮ್ಮನಹಳ್ಳಿ ಕ್ಷೇತ್ರಕ್ಕೂ ಶಕ್ತಿಯನ್ನು ವೃದ್ಧಿಸಿಕೊಳ್ಳಲು ಸಹಾಯಕ. ಈ ಬಾರಿ ಬಿಜೆಪಿಯನ್ನು ಮಣಿಸಲು ಎಲ್ಲರೂ ಒಂದಾಗಿ ಕೆಲಸ ಮಾಡಬೇಕು ಎಂದು ನಿರ್ಧಾರ ಮಾಡಿದ್ದೇವೆ. ಆದ್ದರಿಂದ ಈ ಹೊಸ ಬದಲಾವಣೆಯನ್ನು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲೂ ನಾವು ಕಾಣಬಹುದು ಎಂಬ ನಿರೀಕ್ಷೆ ಇಟ್ಟಿದ್ದೇವೆ ಎಂದು ಹೇಳಿದರು.
