ಪ್ರಧಾನಿ ಮೋದಿಯನ್ನು ವಿಷದ ಹಾವು ಎಂದು ಹೇಳುವ ಮೂಲಕ ತೀವ್ರ ವಿವಾದಕ್ಕೊಳಗಾಗಿದ್ದ ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ಮೋದಿ ಕ್ರೈ ಬೇಬಿ ಎಂದು ವ್ಯಂಗ್ಯವಾಡಿದ್ದಾರೆ. ಬೆಳಗ್ಗೆಯಿಂದ ಸಂಜೆವರೆಗೆ ಅಳುತ್ತಲೇ ಇರುವುದು ಪ್ರಧಾನಿ ಮೋದಿ ಅವರಿಗೆ ರೂಢಿಯಾಗಿಬಿಟ್ಟಿದೆ. ಅವರೊಬ್ಬ ಕ್ರೈ ಬೇಬಿ ಎಂದು ಲೇವಡಿ ಮಾಡಿದ್ದಾರೆ.
ನಗರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು 91 ಬಾರಿ ನನ್ನನ್ನು ವೈಯಕ್ತಿಕವಾಗಿ ನಿಂದಿಸಿದ್ದಾರೆ ಎನ್ನುವ ಮೋದಿ, ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಡಿರುವ ಹಗುರವಾದ ಮಾತುಗಳನ್ನು ಮರೆತಿದ್ದಾರೆ ಎಂದು ಆರೋಪಿಸಿದರು.