ಸುದೀಪ್ ಅವರ ಮ್ಯಾನೇಜರ್ ಜಾಕ್ ಮಂಜು ಅವರಿಂದ ದೂರು ನೀಡಲಾಗಿದ್ದು, ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಪತ್ರ ಬರೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಜಾಕ್ ಮಂಜು ನೀಡಿದ ದೂರಿನನ್ವಯ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುತ್ತೇವೆ ಎನ್ನುವುದರ ಜೊತೆಗೆ ಕೆಲ ಅವಾಚ್ಯ ಶಬ್ದಗಳನ್ನು ಸಹ ಲೆಟರ್ ನಲ್ಲಿ ದುಷ್ಕರ್ಮಿಗಳು ಬರೆದಿದ್ದಾರೆ ಎನ್ನಲಾಗುತ್ತಿದೆ. ಈ ಪತ್ರವು ಸುದೀಪ್ ಅವರ ಮ್ಯಾನೇಜರ್ ಜಾಕ್ ಮಂಜುಗೆ ಸಿಕ್ಕಿದ್ದು ಅದನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಜಾಕ್ ಮಂಜು ನೀಡಿದ ದೂರನ್ನು ಆಧರಿಸಿ ಐಪಿಸಿ 504, 506 ಹಾಗೂ ಐಟಿ ಆಕ್ಟ್ ಅಡಿಯಲ್ಲಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಸುದೀಪ್ ಅವರು ಬಿಜೆಪಿಗೆ ಸೇರುತ್ತಿದ್ದಾರೆ ಎನ್ನುವ ಸುದ್ದಿಯ ಜೊತೆಗೆ ಈ ಪತ್ರ ಕೂಡ ಸಾಕಷ್ಟು ಸಂಚಲನವುಂಟು ಮಾಡಿದೆ.
