ಮನೆಯ ಹೊರ ಆವರಣದಲ್ಲಿ ಅಡಗಿ ಕುಳಿತಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೆಂದಗೆ ಗ್ರಾಮದಲ್ಲಿ ನಡೆದಿದೆ. ಕೆಂದಗೆ ಗ್ರಾಮದ ದೇವರಾಯ ಗೌಡ ಅವರ ಮನೆ ಆವರಣದಲ್ಲಿ ಈ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ.
ಸುಮಾರು 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಇದಾಗಿದೆ. ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಮಹೇಶ ನಾಯ್ಕ ಅವರು ರಕ್ಷಣೆ ಮಾಡುತ್ತಿರುವ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿಯಲಾಗಿದೆ.