ಬಾಲನಟಿಯಾಗಿ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ನಟಿ ಖುಷ್ಭೂ ಆ ಬಳಿಕ ಸ್ಟಾರ್ ನಟಿಯಾಗಿ ಮಿಂಚುತ್ತಿದ್ದಾರೆ. ಅದರಲ್ಲೂ ಕನ್ನಡದಲ್ಲಿ ರವಿಚಂದ್ರನ್ ಹಾಗೂ ಖುಷ್ಭೂ ಜೋಡಿ ಸೂಪರ್ ಹಿಟ್ ಆಗಿತ್ತು. ಆದರೆ 2011ರಲ್ಲಿ ತೆರೆಕಂಡ ನಾನಲ್ಲ ಸಿನಿಮಾದ ಬಳಿಕ ನಟಿ ಖುಷ್ಭೂ ಮತ್ತೆ ಗಾಂಧಿನಗರಕ್ಕೆ ಬಂದಿರಲಿಲ್ಲ. ಇದೀಗ ಬರೋಬ್ಬರಿ 12 ವರ್ಷಗಳ ಬಳಿಕ ನಟ ರವಿಚಂದ್ರನ್ ಗಾಗಿ ಮತ್ತೆ ಸ್ಯಾಂಡಲ್ ವುಡ್ ಗೆ ಕಂಬ್ಯಾಕ್ ಮಾಡುತ್ತಿದ್ದಾರೆ.
ನಿರ್ದೇಶಕ ಗುರುರಾಜ್ ಕುಲಕರ್ಣಿ ಎನ್ನುವವರು ರವಿಚಂದ್ರನ್ ಗಾಗಿ ಸಿನಿಮಾವೊಂದನ್ನು ಮಾಡುತ್ತಿದ್ದು, ಈ ಸಿನಿಮಾದ ನಾಯಕಿಯನ್ನಾಗಿ ಖುಷ್ಬೂ ಅವರನ್ನೇ ಆಯ್ಕೆ ಮಾಡಿಕೊಳ್ಳಬೇಕು ಅಂದುಕೊಂಡಿದ್ದಾರೆ. ಈಗಾಗಲೇ ಒಂದು ಸುತ್ತಿನ ಮಾತುಕತೆ ಕೂಡ ಆಗಿದೆ ಎನ್ನಲಾಗುತ್ತಿದೆ. ಸದ್ಯ ಅನಾರೋಗ್ಯದ ಕಾರಣದಿಂದ ಖುಷ್ಭೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.