ಧಾನಿ ನರೇಂದ್ರ ಮೋದಿ ಏಪ್ರಿಲ್ 9 ರಂದು ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆ ಭದ್ರತೆ ದೃಷ್ಟಿಯಿಂದ ಏ.6 ರಿಂದಲೇ ಬಂಡೀಪುರದಲ್ಲಿ ಸಫಾರಿ, ಹೋಂ ಸ್ಟೇ ಹಾಗೂ ರೆಸಾರ್ಟ್ ಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ.
ಪ್ರಧಾನಿ ಮೋದಿ ಅವರು ಏಪ್ರಿಲ್ 9ರಂದು ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಲಿದ್ದಾರೆ. ಹೀಗಾಗಿ ಗುರುವಾರದಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅಲ್ಲದೆ ಬಂಡೀಪುರ ವ್ಯಾಪ್ತಿಯ ಎಲ್ಲ ಹೋಂ ಸ್ಟೇಗಳು, ರೆಸಾರ್ಟ್ ಗಳನ್ನು ಬಂದ್ ಮಾಡಲಾಗುತ್ತಿದೆ.