ಇಂದು ರಾಮನಗರ (Ramanagara) ಜಿಲ್ಲೆಯ ಚನ್ನಪಟ್ಟಣಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಗಮನ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯ ಯ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.
ಚನ್ನಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದ ಬಳಿ ಮೋದಿ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಇಂದು ಬೆಳಗ್ಗೆ 11ರಿಂದ ಸಂಜೆ 4 ಗಂಟೆವರೆಗೆ ಮಾರ್ಗ ಬದಲಾವಣೆ ಮಾಡಿ ರಾಮನಗರ ಹಾಗೂ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದೆ.