ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿದೆ. ಕೋಮುದ್ವೇಷ ಭಾಷಣ ಆರೋಪದಡಿಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಮನೋಜ್ ಕುಮಾರ್ ಅವರು ನೀಡಿದ ದೂರಿನ ಮೇರೆಗೆ ಸಚಿವ ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ಪ ಸಂಖ್ಯಾತ ಕ್ರೈಸ್ತ ಸಮುದಾಯವನ್ನು ಹೊಡೆದು ಓಡಿಸಿ ಎಂದು ಸಚಿವ ಮುನಿರತ್ನ ಹೇಳಿಕೆ ನೀಡಿದ್ದರು.
ಕೋಮುದ್ವೇಷ ಪ್ರಚೋದಿತ ಭಾಷಣದ ಬಗ್ಗೆ ಚುನಾವಣಾಧಿಕಾರಿ ಮನೋಜ್ ಕುಮಾರ್ರಿಂದ ದೂರು ನೀಡಿದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನೂ ಮತ್ತೊಂದೆಡೆ ಸಂಸದ ಡಿಕೆ ಸುರೇಶ್, ಮಾ.19 ರಂದು ಸಚಿವ ಮುನಿರತ್ನ ಭಾಷಣದ ವೇಳೆ ಪ್ರಚೋದನೆಕಾರಿ ಮಾತುಗಳನ್ನು ಆಡಿದ್ದಾರೆ ಎಂದು ಆರೋಪ ಮಾಡಿದ್ದರು.