ರೆಹಮಾನ್ ವೇದಿಕೆಯಲ್ಲಿ ಹಾಡುತ್ತಿದ್ದ ವೇಳೆ ಎಂಟ್ರಿ ಕೊಟ್ಟ ಪುಣೆ ಪೊಲೀಸರು, ಆಯೋಜಕರಿಗೆ ಈವೆಂಟ್ ನಿಲ್ಲಿಸುವಂತೆ ಹೇಳಿದ್ದಾರೆ. ವೇದಿಕೆಯ ಮೇಲೆ ಹಾಡುತ್ತಿದ್ದ ರೆಹಮಾನ್ಗೂ ಪೊಲೀಸರು ಹಾಡು ನಿಲ್ಲಿಸುವಂತೆ ಸೂಚಿಸಿದ್ದಾರೆ. ಪೊಲೀಸರ ಸೂಚನೆಯಂತೆ ಕಾರ್ಯಕ್ರಮ ಅರ್ಧಕ್ಕೆ ನಿಲ್ಲಿಸಲಾಗಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರಿ ಆಕ್ರೋಶ ವ್ಯಕ್ತವಾಗಿದೆ.