ಮೇ 10ರಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಜಿಲ್ಲೆಯ 7 ವಿಧಾನಸಭೆ ಕ್ಷೇತ್ರಗಳಲ್ಲಿ 1,798 ಮತಗಟ್ಟೆಗಳಿವೆ. ಚುನಾವಣಾ ಕಾರ್ಯಕ್ಕೆ 8 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮತದಾನ ಕೇಂದ್ರಕ್ಕೆ ಅಧಿಕಾರಿಗಳು ತೆರಳಲಿದ್ದಾರೆ.
ಮೇ 10ರ ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಪ್ರತಿ 2 ಗಂಟೆಗೊಮ್ಮೆ ಆಯೋಗಕ್ಕೆ ಮಾಹಿತಿ ನೀಡಲು ಸೂಚಿಸಿದ್ದೇವೆ. ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಎರಡು ಸಖಿ ಮತಗಟ್ಟೆ ನಿರ್ಮಾಣ ಮಾಡಲಾಗಿದೆ. ಜಿಲ್ಲೆಗಳ 7 ಕ್ಷೇತ್ರಗಳಲ್ಲಿ 35 ಸಾಂಪ್ರದಾಯಿಕ ಮತಗಟ್ಟೆ ನಿರ್ಮಾಣ ಮಾಡಲಾಗಿದೆ ಎಂದು ಮಂಡ್ಯದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಗೋಪಾಲಕೃಷ್ಣ ಹೇಳಿದರು.