ಪಂಜಾಬ್ ನ ಮಾಜಿ ಮುಖ್ಯಮಂತ್ರಿ, ಶಿರೋಮಣಿ ಅಕಾಲಿದಳದ (Shiromani Akali Dal) ಸಂಸ್ಥಾಪಕ ಪ್ರಕಾಶ್ ಸಿಂಗ್ ಬಾದಲ್ (Parkash Singh Badal) ಮಂಗಳವಾರ ನಿಧನರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಏಪ್ರಿಲ್ 21 ರಂದು ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಐದು ಬಾರಿ ಪಂಜಾಬ್ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಪ್ರಕಾಶ್ ಸಿಂಗ್ ಬಾದಲ್ ಅವರು ಕಳೆದ ವರ್ಷ ನಡೆದ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಅತ್ಯಂತ ಹಿರಿಯ ಅಭ್ಯರ್ಥಿಯಾಗಿದ್ದರು. ಕಳೆದ ವರ್ಷ ಜೂನ್ನಲ್ಲಿಯೂ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ವರ್ಷ ಅವರಿಗೆ ಕೋವಿಡ್-19 ಸೋಂಕು ಸಹ ತಗುಲಿತ್ತು.