ರಾಷ್ಟ್ರೀಯ ಜನಹಿತ ಪಾರ್ಟಿ ಪಕ್ಷಕ್ಕೆ ಚುನಾವಣಾ ಆಯೋಗವು, ನೀಡಿರುವ ಕುಕ್ಕರ್ ಚಿಹ್ನೆಯನ್ನು ಶುಕ್ರವಾರ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಬಿಡುಗಡೆ ಮಾಡಲಾಯಿತು. ಜನಹಿತ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಮಂಜುನಾಥ್ ಅವರು ಕುಕ್ಕರ್ ಚಿಹ್ನೆ ಮತ್ತು ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದರು. ನಾಡಿನ ಜನರ ಸಂಕಷ್ಟ ನಿವಾರಣೆ ಮತ್ತು ನಾಡು, ನುಡಿ ಹಾಗೂ ಮೂಲ ಸಮಸ್ಯೆಗಳನ್ನು ಬಗೆಹರಿಸುವುದು ನೂತನ ಪಕ್ಷದ ಗುರಿಯಾಗಿದೆ. ರಾಜ್ಯದ 224 ಕ್ಷೇತ್ರಗಳಲ್ಲೂ ಸಮಾಜಮುಖಿ ಸೇವೆ ಸಲ್ಲಿಸುವ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ದಿಸಲಿದ್ದಾರೆ. ಹಾಗೂ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಿದ್ದು. ನಾಡಿನ ನೆಲ, ಜಲ, ಭಾಷೆ ರಕ್ಷಣೆಗಾಗಿ ಅವಿರತವಾಗಿ ಪಕ್ಷ ಹೋರಾಟ ಮಾಡಲಿದೆ. ಜನರ ಆಶಯದಂತೆ ಯೋಜನೆಗಳನ್ನು ರೂಪಿಸಲಾಗುವುದು” ಎಂದರು. ಉನ್ನತ ವೈದ್ಯಕೀಯ ಸೌಲಭ್ಯ, ಶಿಕ್ಷಣ, ಆರೋಗ್ಯ, ರೈತರ ಬದುಕು ಸಾಗಿಸಲು ಹಾಗೂ ನಿರುದ್ಯೋಗ ನಿವಾರಣೆಗಾಗಿ ತಲಾ 15 ಲಕ್ಷ ರೂಪಾಯಿಗಳ ಗ್ಯಾರಂಟಿ ಕಾರ್ಡ್ ವಿತರಿಸಲಾಗುವುದು. ರೈತರ ಬೆಳೆಗೆ ಯೋಗ್ಯ ಬೆಂಬಲ ಬೆಲೆ ನಿಗದಿ, ಶುದ್ಧ ಕುಡಿಯುವ ನೀರು, ಉತ್ತಮ ರಸ್ತೆ ಮತ್ತು 24 ಗಂಟೆಗಳ ಕಾಲ ವಿದ್ಯುತ್ ನೀಡುವುದು, ಹೈನುಗಾರಿಕೆ, ತೋಟಗಾರಿಕೆ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗಿದೆ” ಎಂದು ಹೇಳಿದ್ದಾರೆ.