ವಿಧಾನಸಭೆ ಚುನಾವಣೆ (Karnataka Assembly Election 2023) ಹಿನ್ನೆಲೆ ಕಾಂಗ್ರೆಸ್ (Congress) ಕೇಂದ್ರ ನಾಯಕರು ಕರ್ನಾಟಕ ಟೂರ್ ಮಾಡುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ (Rahul gandhi) ಅವರು ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರ ನಡೆಸಿದ್ದರು. ರಾಹುಲ್ಗಾಂಧಿ ಅವರು ದೆಹಲಿಗೆ ವಾಪಸಾದ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಅವರು ಕರ್ನಾಟಕಕ್ಕೆ ಬಂದಿದ್ದಾರೆ. ನಿನ್ನೆ ಮೈಸೂರು (Mysore) ಜಿಲ್ಲೆಯಲ್ಲಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಿದ್ದರು.
